ಹಾರ್ದಿಕ್ – ಕಾಂಗ್ರೆಸ್ ಬೆಂಬಲಿಸಿದರೆ ನಷ್ಟವೇನಿಲ್ಲ- ವಿಜಯ್‌ರೂಪಾನಿ

ಅಹಮದಾಬಾದ್, ನ.೨೬- ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಹಾರ್ದಿಕ್ ಪಟೇಲ್ ಮೈತ್ರಿ ಮಾಡಿಕೊಂಡಿದೆ. ಆದರೆ, ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್‌ರೂಪಾನಿ ಹೇಳಿದ್ದಾರೆ.
ಚುನಾವಣೆಯಲ್ಲಿ ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಆಶ್ರಯ ಪಡೆದು ನಾಯಕರು ಜಾತಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅಹಮದಾಬಾದ್‌ನಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್‌ರೂಪಾನಿ, ಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವವರು ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ ಎಂದು ದೂರಿದರು.
ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ನಾಯಕ ಹಾರ್ದಿಕ್ ಪಟೇಲ್ ಚುನಾವಣೆಯಲ್ಲಿ ಬಹಿರಂಗವಾಗಿ ಬೆಂಬಲ ನೀಡಿರುವುದು ಚುನಾವಣಾ ಮೈತ್ರಿಯಲ್ಲ. ಇಬ್ಬರ ನಡುವೆ ಚೌಕಾಸಿ ನಡೆದಿವೆ ಎಂದು ಆರೋಪಿಸಿದರು.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ರಾಹುಲ್ ಒಬ್ಬ ಸುಳ್ಳು ಹೇಳುವ ವ್ಯಕ್ತಿಯೆಂದು ಆರೋಪಿಸಿದರು.

Leave a Comment