ಹಾವು ಕಚ್ಚಿ ಗ್ರಾ.ಪಂ. ಬಿಲ್‌ಕಲೆಕ್ಟರ್ ಸಾವು

ಕೊರಟಗೆರೆ, ಆ. ೬- ತೋಟಕ್ಕೆ ನೀರು ಹಾಯಿಸುವ ವೇಳೆ ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅವದಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಬೊಮ್ಮಲದೇವಿಪುರ ಗ್ರಾಮ ಪಂಚಾಯ್ತಿ ಬಿಲ್‌ಕಲೆಕ್ಟರ್ ಎ.ಡಿ. ಸಂಜೀವರಾಯಪ್ಪ (48) ಎಂಬುವರೇ ಸಾವನ್ನಪ್ಪಿರುವ ದುರ್ದೈವಿ. ಇವರು ತಮ್ಮ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಂಜೀವರಾಯಪ್ಪ ಅವರು ಬೊಮ್ಮಲದೇವಿಪುರ  ಗ್ರಾಮ ಪಂಚಾಯ್ತಿಯಲ್ಲಿ ಸುಮಾರು ಏಳೆಂಟು ವರ್ಷಗಳಿಂದ ಬಿಲಿ‌ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment