ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

ಬೆಂಗಳೂರು, ಮೇ 13-  ಕನ್ನಡ  ಚಿತ್ರರಂಗದ  ಹಾಸ್ಯ ನಟ ಮೈಕಲ್ ಮಧು ಇಂದು ವಿಧಿವಶರಾಗಿದ್ದಾರೆ.

ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದ ಮೈಕಲ್ ಮಧು ಇದ್ದಕ್ಕಿದ್ದಂತೆ ಕೆಳಗೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಕುಟುಂಬದ ಸದ್ಯರು ತಿಳಿಸಿದ್ದಾರೆ.

ಕಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೆಲ ಹೊತ್ತಿನಲ್ಲಿ ಸಾವನ್ನಪ್ಪಿದ್ದಾರೆ ನಾಳೆ ಬೆಳಿಗ್ಗೆ ಕಿಮ್ಸ್ ಆಸ್ಪತ್ರೆ, ಮೈಕಲ್ ಮಧು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸಲಿದೆ. ಸೂರ್ಯವಂಶ, ಓಂ, ಶ್ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಮೈಕಲ್ ಮಧು ಗುರುತಿಸಿಕೊಂಡಿದ್ದರು. ಹಲವು ವರ್ಷಗಳಿಂದ ಕಾಲ ಚಿತ್ರರಂಗದಲ್ಲಿ ಹಾಸ್ಯ ಕಲಾವಿದರಾಗಿ ನಟಿಸುತ್ತಿದ್ದರು.

ಮೈಕೆಲ್ ಮಧು ಅವರ ನಿಧನಕ್ಕೆ ಚಿತ್ರರಂಗದ ಹಲವು ಕಲಾವಿದರು. ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

Leave a Comment