ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ: ಬಿಜೆಪಿ ಸಂಭ್ರಮಾಚರಣೆ

ಮಕೂರು, ಆ. ೯- ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಂವಿಧಾನಿಕ ಸ್ಥಾನಮಾನ ಕಲ್ಪಿಸುವ ಮಸೂದೆ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮೋರ್ಚಾ ವತಿಯಿಂದ ಸಂಭ್ರಮಾಚಾರಣೆಯನ್ನು ನಗರದ ಟೌನ್ ಹಾಲ್ ವೃತ್ತದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಹಿಂದುಳಿದ ವರ್ಗಗಳಲ್ಲಿ ಸಣ್ಣ ಪುಟ್ಟ ಜಾತಿಗಳಿಗೆ ಈ ಮಸೂದೆಯಿಂದ ಸಾಮಾಜಿಕ ನ್ಯಾಯ ದೊರಕಿಸಲು ಅನುಕೂಲವಾಗಲಿದೆ. ಬಿಜೆಪಿ ಪಕ್ಷವು ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿದ್ದು, ಹಿಂದುಳಿದ ವರ್ಗಗಳ ಮೇಲಿನ ದೌರ್ಜನ್ಯಗಳನ್ನು ಹತ್ತಿಕ್ಕಲು ಈ ಮಸೂದೆ ನೆರವಾಗಲಿದೆ ಎಂದರು.

ಬಿಜೆಪಿ ರಾಜ್ಯ ಒಬಿಸಿ ಉಪಾಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್ ಮಾತನಾಡಿ, ವಿವಿಧ ರಾಜ್ಯಗಳಲ್ಲಿರುವ ಜಾತಿಗಳ ಗೊಂದಲಗಳು ಹಾಗೂ ತಾರತಮ್ಯ ಹೋಗಲಾಡಿಸಲು ಈ ಮಸೂದೆ ಅನುಕೂಲವಾಗಲಿದೆ ಎಂದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್ ಮಾತನಾಡಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ದುರ್ಬಲ ವರ್ಗಗಳಿಗೆ ಈ ಮಸೂದೆ ನೆರವಿಗೆ ಬರಲಿದೆ. ಇಂತಹ ಮಸೂದೆಯನ್ನು ತಂದಂತಹ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು ಎಂದರು.

ಸಂಭ್ರಮಾಚರಣೆಯಲ್ಲಿ ನಗರ ಒಬಿಸಿ ಮೋರ್ಚಾ ಅಧ್ಯಕ್ಷ ವೇದಮೂರ್ತಿ, ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ಕಾರ್ಯದರ್ಶಿ ರುದ್ರೇಶ್, ನಗರ ಪ್ರಧಾನ ಕಾರ್ಯದರ್ಶಿ ರವೀಶ್, ಹೆಬ್ಬಾಕ ಮಲ್ಲಿಕಾರ್ಜುನ್, ಕೃಷ್ಣಮೂರ್ತಿ, ಪ್ರೊ. ಮರಿಬಸಪ್ಪ, ರವೀಂದ್ರ, ಗೋಪಿ, ವಿಷ್ಣು, ಶ್ರೀನಿಧಿ ರಾಜಣ್ಣ, ಪ್ರೇಮ ಹೆಗ್ಡೆ, ಜ್ಯೋತಿ ತಿಪ್ಪೇಸ್ವಾಮಿ, ಕಮಲಮ್ಮ, ಭಾರತಿ, ವಿಜಯಲಕ್ಷ್ಮಿ, ಟಿ.ವಿ. ವೆಂಕಟೇಶ್, ನಾಗರಾಜು, ಮೂರ್ತಿ, ಶಬ್ಬೀರ್, ನವೀನ್ ಮತ್ತಿತರರು ಭಾಗವಹಿಸಿದ್ದರು.

Leave a Comment