ಹಿಟ್ ಆಂಡ್ ರನ್: ಅರುಣ್ ಕುಮಾರ್ ಪುತ್ತಿಲ ಕಾರ್ ವಶ

ಮಂಗಳೂರು, ಫೆ.೧೫- ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರು ಹಿಂದೂ ಸಂಘಟನೆ ಪ್ರಮುಖ ಅರುಣ್ ಕುಮಾರ್ ಪುತ್ತಿಲರಿಗೆ ಸೇರಿದ್ದಾಗಿದೆ ಎಂದು ಕಡಬ ಪೋಲೀಸರು ತಿಳಿಸಿದ್ದಾರೆ. ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಬಗ್ಗೆ ಸಿಸಿ ಕೆಮರಾ ದೃಶ್ಯಗಳನ್ನು ಆಧಾರಿಸಿ ಪತ್ತೆಹಚ್ಚಲಾಗಿದೆ.

೨೦೧೯ರ ಸೆಪ್ಟೆಂಬರ್೯ರಂದು ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಮಹಿಳೆಗೆ ಡಿಕ್ಕಿ ಹೊಡೆದ ಕಾರ್ ಪರಾರಿಯಾಗಿತ್ತು. ಘಟನೆಯಲ್ಲಿ ಮಹಿಳೆ ಸುಮತಿ(೪೮) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆರು ತಿಂಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment