ಹಿರಿಯೂರು ಕಾಲೇಜಿನಲ್ಲಿ ವಿಶ್ವಾಸಕಿರಣ ತರಬೇತಿ

ಹಿರಿಯೂರು.ಅ.12- ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವಾಸ ಕಿರಣ ತರಬೇತಿ ಕಾರ್ಯಕ್ರಮ ಉದ್ಘಾಟಿಸಲಾಯಿತು, ನಗರಸಭೆ ಅಧ್ಯಕ್ಷರಾದ ಟಿ.ಚಂದ್ರಶೇಕರ್ ಮಾತನಾಡಿ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು, ಹಾಗೂ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾತಿ ತಿಳಿಸಿದರು, ಬಿಇಓ ನಟರಾಜ್ ಮಾತನಾಡಿ ವಿದ್ಯಾರ್ಥಿಗಳು ಶಿಸ್ತಿನಿಂದ ಒಳ್ಳೆಯ ನಡತೆಯನ್ನು ರೂಢಿಸಿಕೊಳ್ಳಬೇಕು ಎಂದರು, ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಂಕರಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು, ಬಿ.ಆರ್.ಸಿ ರಾಘವೇಂದ್ರ, ಪಾಟೀಲ್, ಉಪಪ್ರಾಂಶುಪಾಲರಾದ ರಾಮಚಂದ್ರಪ್ಪ, ಗುರಸ್ವಾಮಿ ಸಿಲಾರ್ ಸಾಬ್ ಮಂಜುನಾಥ್, ಮತ್ತಿತರರು ಪಾಲ್ಗೊಂಡಿದ್ದರು.

Leave a Comment