ಹಿರಿಯ ನಾಗರಿಕರನ್ನು ಗೌರವದಿಂದ ಕಾಣಲು ಸಲಹೆ

ಬೆಂಗಳೂರು, ಜೂ. ೧೪- ಠಾಣೆಗೆ ಸಮಸ್ಯೆ ಹೇಳಿಕೊಂಡು ಬರುವ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕೆಂದು ಅವರು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಲ್ತ್‌ಏಜ್ ಇಂಡಿಯಾ ಸಹಯೋಗದಲ್ಲಿ ನಡೆದ ಹಿರಿಯರ ನಾಯಕರ ಶೋಷಣೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಠಾಣೆಗೆ ಬರುವ ಹಿರಿಯ ನಾಗರಿಕರ ಸಮಸ್ಯೆಗಳಿಗೆ ನಿರ್ಲಕ್ಷ್ಯ ತೋರದಂತೆ ಅವರು ಸಲಹೆ ನೀಡಿದರು.
ವಯಸ್ಸಾದ ಕಾಲದಲ್ಲಿ ಪೋಷಕರನ್ನು ಮಕ್ಕಳು ಸರಿಯಾಗಿ ನೋಡಿಕೊಳ್ಳುವುದು ಅವರ ಕರ್ತವ್ಯ, ಆದರೆ, ಮನೆಯಿಂದ ಹೊರಹಾಕಿ ಅಮಾನವೀಯವಾಗಿ ವರ್ತಿಸುವುದು ಹೆಚ್ಚಾಗುತ್ತಿದ್ದು, ಇಂತಹ ಸಮಸ್ಯೆಗಳನ್ನು ತೋಡಿಕೊಂಡು ಬರುವ ಹಿರಿಯ ನಾಗರಿಕರಿಗೆ ಧೈರ್ಯ ತುಂಬಬೇಕೆಂದು ಹೇಳಿದರು.
ಠಾಣೆಗೆ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ನೀಡಲು ಬರುವ ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ವಹಿಸುವುದು, ಅಗೌರದಿಂದ ನೋಡಿಕೊಂಡರೆ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಯಸ್ಸಾದ ಪೋಷಕರ ಬಗ್ಗೆ ನಿರ್ಲಕ್ಷ್ಯ ತಾಳಿ ಅವರನ್ನು ಮನೆಯಿಂದ ಹೊರ ಹಾಕುವ ಮಕ್ಕಳನ್ನು ಠಾಣೆಗೆ ಕರೆಸಿ ಅವರ ಕರ್ತವ್ಯದ ಬಗ್ಗೆ ಮಾಹಿತಿ ನೀಡಬೇಕು. ಕಾನೂನು ಉಲ್ಲಂಘನೆಯ ಬಗ್ಗೆಯೂ ಅರಿವು ಮೂಡಿಸಬೇಕೆಂದು ಹೇಳಿದರು.

Leave a Comment