ಹಿರಿಯ ಸಚಿವರಿಗೆ ಕೊಕ್ ನೀಡುವ ಬಗ್ಗೆ ಗೊತ್ತಿಲ್ಲ: ವಿ ಸೋಮಣ್ಣ

ಬೆಂಗಳೂರು, ಜ 28 -ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಅನುಭವಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿದ್ದಾರೆ. ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ವಿಚಾರ ತಮಗೆ ತಿಳಿದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಲಾಲ್‌ಬಾಗ್‌ ಉದ್ಯಾನವನಕ್ಕೆ ಭೇಟಿ ನೀಡಿ ಅಲ್ಲಿನ ವಾಯುವಿಹಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಲಾಲ್‌ಬಾಗ್‌ನಲ್ಲಿ ಕೈಗೊಳ್ಳಬೇಕಾದ ಕೆಲಸಕಾರ್ಯಗಳು, ಮೂಲಸೌಕರ್ಯಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.

ಈ ವೇಲೆ ಸ್ವಲ್ಪ ಹೊತ್ತು ವಾಯುವಿಹಾರ ನಡೆಸಿದ ಅವರು, ವಾಕಿಂಗ್ಗೆ ಬರುವ ಜನರ ಜೊತೆ ಸಮಾಲೋಚನೆ ನಡೆಸಿದರು.

ಸಚಿವರು ಪಾರ್ಕ್‌ನಲ್ಲಿ ಮಾಡಬೇಕಾದ ಬದಲಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ತದನಂತರ ಲಾಲ್‌ಬಾಗ್ ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಉಪಕರಣಗಳ ಪರಿಶೀಲನೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವದ ಬಳಿಕ ಇಲ್ಲಿಗೆ ಭೇಟಿ ನೀಡಿದ್ದೇನೆ. ಮೊನ್ನೆಯಷ್ಟೇ ಕಬ್ಬನ್ ಪಾರ್ಕ್‌ಗೆ ಹೋಗಿದ್ದೆ. ಇಲ್ಲಿ ವಾಯುವಿಹಾರಕ್ಕೆ ಬರುವವರ ಆರೋಗ್ಯ ತಪಾಸಣೆಗೆ ಆಸ್ಪತ್ರೆಯನ್ನು ಮಾಡಲಾಗಿದ್ದು, ಮುಂದಿನ ತಿಂಗಳ ಆಯವ್ಯಯ ಮಂಡನೆ ಮಾಡಲಾಗುತ್ತದೆ ಎಂದರು.

ಆಯವ್ಯಯದಲ್ಲಿ ತೋಟಗಾರಿಕೆ ಇಲಾಖೆ ಅಭಿವೃದ್ಧಿಗೆ ಹಣ ಇಡುವಂತೆ ಮನವಿ ಸಲ್ಲಿಸಲಾಗಿದೆ. ಮೈಸೂರಿನ 10 ಕಡೆಗಳಲ್ಲಿ ಉದ್ಯಾನವನಗಳನ್ನು ಮಾಡಲು ಚಿಂತಿಸಲಾಗುತ್ತಿದೆ ಎಂದರು.

ಇತ್ತೀಚೆಗಷ್ಟೇ ಸಚಿವರು ಕಬ್ಬನ್ ಪಾರ್ಕ್‌ಗೆ ಭೇಟಿ ನೀಡಿ ವಾಯುವಿಹಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು.

Leave a Comment