ಹುಬ್ಬಳ್ಳಿ-ವಾರಣಾಸಿ ರೈಲು ಸಂಚಾರಕ್ಕೆ ದಿ.23 ರಂದು ಚಾಲನೆ

ಹುಬ್ಬಳ್ಳಿ, ಮೇ 19- ಹುಬ್ಬಳ್ಳಿ ವಾರಣಾಸಿ ರೈಲು ಸಂಚಾರಕ್ಕೆ ಇದೇ ದಿ. 23 ರಂದು ಚಾಲನೆ ನೀಡಲಾಗುತ್ತಿದೆ ಎಂದು ರೇಲ್ವೆ ಖಾತೆ ಸಹಾಯಕ ಸಚಿವರಾದ ಮನೋಜ ಸಿಹ್ನಾ ಹೇಳಿದರು.
ನಗರದ ನ್ಯೂ ಕಾಟನ್ ಮಾರ್ಕೆಟ್ ನಲ್ಲಿನ ಸಾಂಸ್ಕೃತಿಕ ಭವನದಲ್ಲಿಂದು ಹಾನಗಲ್ ಕುಮಾರೇಶ್ವರ ಸ್ವಾಮಿಜಿಯವರ 150ನೇ ಜಯಂತಿ ಮಹೋತ್ಸವದ ಅಂಗವಾಗಿ ಸ್ವಾಮಿಜಿಯವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.
ಮುಂಬರುವ ದಿನಗಳಲ್ಲಿ ಎಲ್ಲ ಗ್ರಾಮ ಪಂಚಾಯತಿಗಳಲ್ಲಿಯೂ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಹಾನಗಲ್ ಕುಮಾರಸ್ವಾಮಿಗಳು ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಬದಲಾವಣೆ ತಂದವರು. ಸ್ವಾಮಿಗಳ ಭಾವಚಿತ್ರವುಳ್ಳ ಅಂಚೆ ಚೀಟಿ ಬಿಡುಗಡೆ ಮಾಡಿದುದು ನನ್ನ ಭಾಗ್ಯ ಎಂದು ಸಿಹ್ನಾ ಹೇಳಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ ಮತ್ತಿತರರು ಉಪಸ್ಥಿತರಿದ್ದರು.

Leave a Comment