ಹೃದಯಾಘಾತದಿಂದ ವ್ಯಕ್ತಿ ಸಾವು

ಧಾರವಾಡ, ನ 14-  ಹೃದಯಾಘಾತದಿಂದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಕುರಿತು ಉಪನಗರ ಠಾಣೆಯಲ್ಲಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.
ಮೃತರನ್ನು ಶ್ರೀನಗರದ ಬಳಿಯ ಭಾವಿಕಟ್ಟಿ ಪ್ಲಾಟ್‍ನ ನಿವಾಸಿ ಬಸವರಾಜ ಸುತಗಟ್ಟಿ(32) ಎಂದು ಗುರುತಿಸಲಾಗಿದೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನ ಅಥಣಿ ಶಾಖೆಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ ಭಾನುವಾರ ಸಂಬಂಧಿಕರ ಮದುವೆ ಸಮಾರಂಭಕ್ಕೆ ಧಾರವಾಡಕ್ಕೆ ಬಂದಾಗ ಹೃದಯಾಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮೃತರ ಪತ್ನಿ ಸರಿತಾ ಸುತಗಟ್ಟಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Comment