ಹೆಚ್‌ಡಿಡಿ, ಹೆಚ್‌ಡಿಕೆ ಭಾವಚಿತ್ರ ಹಿಡಿದು ಪ್ರತಿಭಟನೆ

ಬೆಂಗಳೂರು, ಸೆ. ೧೧- ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಬಂಧನವನ್ನು ಪ್ರತಿಭಟಿಸಿ, ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನಕಪುರ, ರಾಮನಗರ ಕ್ಷೇತ್ರದಿಂದಲೇ ಅತಿ ಹೆಚ್ಚು ಜನರು ಭಾಗವಹಿಸಿದ್ದರು.
ಎರಡು ಕ್ಷೇತ್ರಗಳಿಂದ ಸುಮಾರು 400 ಬಸ್‌ಗಳಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಟಿ. ಬೆಕುಪ್ಪೆ, ಶ್ರೀನಿವಾಸಹಳ್ಳಿ, ಯಾಪೇಗೌಡನ ದೊಡ್ಡಿ, ತಬ್ಬೇಹಳ್ಳಿ, ಕೆಂಪೇಗೌಡನ ದೊಡ್ಡಿ, ಅರಳಾಲು, ಚೌಕಸಂದ್ರ ಗ್ರಾಮಗಳು ಸೇರಿದಂತೆ 100ಕ್ಕೂ ಹೆಚ್ಚು ಹಳ್ಳಿಗಳ ಜನರು ಪ್ರತಿಭಟನೆಯಲ್ಲಿ ಪಾಲ್ಲೊಂಡರು.
ಮೈಸೂರು ಪ್ರಾಂತ್ಯ ಮತ್ತಿತತರ ಭಾಗಗಳಿಂದಲೂ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆಯುದ್ಧಕ್ಕೂ ಡಿ.ಕೆ. ಶಿವಕುಮಾರ್ ಅವರ ಪೊಸ್ಟರ್‌ಗಳು ರಾರಾಜಿಸಿದ್ದವು. ಅವರ ಭಾವಚಿತ್ರದ ಜೊತೆಗೆ ಆದಿಚುಂಚನಗಿರಿ ಮಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಭಾವಚಿತ್ರಗಳು ಕೂಡ ಮೆರವಣಿಗೆಯಲ್ಲಿ ಕಂಡು ಬಂದವು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

Leave a Comment