ಹೇಮಂತ್ ನಿಂಬಾಳ್ಕರ್ ಸೇರಿ ಹಲವು ಅಧಿಕಾರಿಗಳಿಗೆ ಸಿಬಿಐ ‘ಶಾಕ್

 

ಬೆಂಗಳೂರು: ಐಎಂಎ ಕಂಪನಿಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ 14 ಕಡೆ ಸಿಬಿಐ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ.
ಐಪಿಎಸ್ ಅಧಿಕಾರಿಗಳ ಮೇಲೆಯೂ ಸಿಬಿಐ ದಾಳಿ ನಡೆಸಲಾಗಿದೆ. ಐಜಿಪಿ ಹೇಮಂತ್ ನಿಂಬಾಳ್ಕರ್, ಪೊಲೀಸ್ ಅಧೀಕ್ಷಕ ಅಜಯ್ ಹಿಲೋರಿ, ಡಿವೈಎಸ್ಪಿ ಶ್ರೀಧರ್ ಸೇರಿ ಹಲವು ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಜ್ಯದ ಹಲವೆಡೆ ದಾಳಿ ನಡೆಸಿದ್ದು, ಮಹತ್ವದ ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗಿದೆ.

Leave a Comment