ಹೈ.ಕ. ವಿಮೋಚನಾ ಪೂರ್ವಭಾವಿ ಸಭೆ

ರಾಯಚೂರು.ಸೆ.06- ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ನಿವೇಶನ ಕಲ್ಪಿಸಿಕೊಡುವಂತೆ ಜಿಲ್ಲಾ ಯೋಜನಾಧಿಕಾರಿಗಳು ಗೃಹ ಇಲಾಖೆಗೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೂಚಿಸಿದರು.
ಅವರಿಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಅಂದು ಬೆಳಿಗ್ಗೆ 8-00 ಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್‌ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ, ನಂತರ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾದ ವೆಂಕಟರಾವ್ ನಾಡಗೌಡ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಆರ್.ಮೈದಾನದಲ್ಲಿ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿರುವರು ಎಂದರು. ಸ್ವತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲಾಗುವುದು ಎಂದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ನಳೀನ್ ಅತುಲ್, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ, ನಗರಸಭೆ ಪೌರಾಯುಕ್ತ ರಮೇಶ್ ನಾಯಕ, ಜಿಲ್ಲಾ ಯೋಜನಾಧಿಕಾರಿ ಈರಣ್ಣ ಬಿರಾದಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment