ಹೊಂದಾಣಿಕೆ: ಸ್ಥಳೀಯ ಸಮಸ್ಯೆಗಳಿವೆ- ಸಿಎಂ

ಮೈಸೂರು, ಆ. 28. ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಯಾವುದೇ ಸಮಸ್ಯೆಗಳಿಲ್ಲ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಹೊಂದಾಣಿಕೆ ವಿಚಾರದಲ್ಲಿ ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಈ ಎರಡೂ ಪಕ್ಷಗಳ ನಡುವೆ ಸಮಸ್ಯೆಗಳಿವೆ ಎಂದು ಹೇಳಿದ್ದೆ. ಆದರೆ, ಆಂಗ್ಲ ಮಾಧ್ಯಮವೊಂದರಲ್ಲಿ ನನ್ನ ಸಂದರ್ಶನದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಶೀಘ್ರವಾಗಿ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಕೆಲ ಅನಿವಾರ್ಯ ಕಾರಣಗಳಿಂದ ಸಮನ್ವಯ ಸಭೆ ನಡೆಸುವುದು ವಿಳಂಬವಾಗಿದೆ. ಕೊಡಗಿನಲ್ಲಿ ನೆರೆ ಪ್ರವಾಹ ಉಂಟಾಗಿ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಕೊಡಗಿನ ಜನರಿಗೆ ಹೊಸ ಬದುಕು ಕಟ್ಟಿಕೊಡಲು ಸರ್ಕಾರ ಬದ್ದವಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದರು.

Leave a Comment