ಹೊಸಪೇಟೆ ನಗರಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ-ಸ್ಥಳ ಪರಿಶೀಲನೆ

ಹೊಸಪೇಟೆ.ಫೆ.12 ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಬಿ.ಎಸ್.ಪಾಟೀಲ್ ರವರು ಭಾನುವಾರ ನಗರದ ನ್ಯಾಯಾಲಯಕ್ಕೆ ಭೇಟಿ ನೀಡಿದ್ದರು.

ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಕಟ್ಟಡ ಮಂಜೂರು ಆಗಿರುವ ಹಿನ್ನಲೆಯಲ್ಲಿ, ನ್ಯಾಯಮೂರ್ತಿ ಬಿ.ಎಸ್.ಪಾಟೀಲ ರು ಭೇಟಿ ನೀಡಿ, ನೂತನ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ದೇವೇಂದ್ರ ನಾಯ್ಕ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಿಶೋರ್ ಕುಮಾರ್, ಕಿರಿಯ ಅಭಿಯಂತರ ಚಂದ್ರಕಾಂತ್, ಹೈಕೋರ್ಟ್ ನ್ಯಾಯಮೂರ್ತಿಗಳಿಗೆ, 3ನೇ ಹೆಚ್ಚುವರಿ ನ್ಯಾಯಾಲಯದ ಕಟ್ಟಡದ ನಕ್ಷೆ ಹಾಗೂ ಸ್ಥಳವನ್ನು ತೋರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಬಿ.ಸಿ.ಬಿರಾದಾರ, ವಕೀಲರ ಪರಿಷತ್ ಸದಸ್ಯ ಜೆ.ಎಂ.ಅನಿಲ್ ಕುಮಾರ್, 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್, ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ್ ಚೌವ್ಹಾಣ್, ಚನ್ನಪ್ಪ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ಹೆಚ್.ಉಮೇಶ್, ಪ್ರಧಾನ ಕಾರ್ಯದರ್ಶಿ ಡಿ.ವೀರನಗೌಡ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಹಾಗೂ ಹಿರಿಯ, ಕಿರಿಯ ವಕೀಲರು ಹಾಜರಿದ್ದರು.

ಸಂವಾದ
3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಸ್ಥಳ ಪರಿಶೀಲನೆ ನಂತರ ಹೈಕೋರ್ಟ್ ನ್ಯಾಯಾಮೂರ್ತಿಗಳು, ವಕೀಲರ ಸಂಘದ ಕಛೇರಿಯಲ್ಲಿ ವಕೀಲರೊಂದಿಗೆ ಸಂವಾದ ನಡೆಸಿದದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ 3ನೇ ಹೆಚ್ಚುವರಿ ನ್ಯಾಯಾಲಯದ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣದ ಜೊತೆಗೆ ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಇಲ್ಲಿಯ ವಕೀಲರು ವೃತ್ತಿ ನೈಪುಣ್ಯತೆ ಹೆಸರುವಾಸಿಯಾಗಿದ್ದಾರೆ. ಹೊಸಪೇಟೆ ಜಿಲ್ಲೆ ಆಗುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಹೆಚ್.ಉಮೇಶ್ ಮಾತನಾಡಿ, ವಕೀಲರ ಹಾಗೂ ಕಕ್ಷಿದಾರರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆದ ಬಿ.ಎಸ್.ಪಾಟೀಲ್ ರು ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೆ ವಕೀಲರ ಸಂಘದ ಸಂಪೂರ್ಣ ಸಹಕಾರ ಇರುತ್ತದೆ ಎಂದರು.

Leave a Comment