128 ಮಂದಿ ವಿಕಲಚೇತನರಿಗೆ ಡಿಸಿಎಂ ತ್ರಿಚಕ್ರ ವಾಹನ ವಿತರಣೆ

ತುಮಕೂರು, ಆ. ೧೦- ಶೇ.75 ಕ್ಕಿಂತ ಹೆಚ್ಚು ವಿಕಲಚೇತನವನ್ನು ಹೊಂದಿರುವ 128 ಮಂದಿ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಿತರಿಸಿದರು.

ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ 128 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ತೀವ್ರತರವಾದ ದೈಹಿಕ ವಿಕಲಚೇತನರ ಶೈಕ್ಷಣಿಕ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಓಡಾಡಲು ಅನುಕೂಲವಾಗುವಂತೆ ಯಂತ್ರ ಚಾಲಿತ ತ್ರಿಚಕ್ರ ವಾಹನವನ್ನು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಉಚಿತವಾಗಿ ನೀಡುತ್ತಿದ್ದು, ಸಾರಿಗೆ ಇಲಾಖೆ ನೋಂದಣಿ ಶುಲ್ಕ ವಿಮೆ ಹಾಗೂ ಇತರೆ ತೆರಿಗೆಗಳನ್ನು ಇಲಾಖೆಯ ವತಿಯಿಂದ ಭರಿಸಲಾಗುತ್ತದೆ.

ಸಮಾರಂಭದಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಶಾಸಕರಾದ ಡಾ. ರಂಗನಾಥ್, ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಸಿಇಓ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ(ಪ್ರಭಾರ) ನಟರಾಜ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Comment