17 ಮಂದಿ ಶಾಸಕರಿಗೆ ಸಚಿವ ಸ್ಥಾನ ನಿಶ್ಚಿತ-ಸಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ, ಜ. 17- ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿಯ ಸ್ಥಿರ ಸರ್ಕಾರ ರಚನೆಯಾಗಲು ೧೭ ಮಂದಿ ಶಾಸಕರುಗಳ ತ್ಯಾಗದ ಫಲವಾಗಿದ್ದು, ಶೀಘ್ರದಲ್ಲಿಯೇ ಈ ಶಾಸಕರಿಗೆ ಸಚಿವ ಸ್ಥಾನ ದೊರಕಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ತಿಳಿಸಿದರು.

ತಾಲ್ಲೂಕಿನ ಸುಲ್ತಾನ ಪೇಟೆ ಗ್ರಾಮದ ಬಳಿಯಿರುವ ನಂದಿ ಡಿಸ್ಕವರಿ ವಿಲೇಜ್‌ನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಿದ್ದ ಅಕ್ಕಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವರಾದ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಬಗ್ಗೆ ಸಾರ್ವಜನಿಕವಾಗಿ ಅರಿವು ಮೂಡಿಸಲು ಆಗಮಿಸಲಿದ್ದು, ಮುಖ್ಯಮಂತ್ರಿಗಳು ಅವರೊಂದಿಗೆ ಚರ್ಚಿಸಿ, ನಂತರ ಸಚಿವ ಸ್ಥಾನ ನೀಡುವರು. ಈ ವಿಷಯದಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲ ಎಂದರು.

ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮಾತನಾಡಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ತಪ್ಪುವವರಲ್ಲ. ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯದಲ್ಲಿ ಉಪಚುನಾವಣೆಯಲ್ಲಿ  ಜಯ ಗಳಿಸಿದವರಿಗೆ ಶೀಘ್ರದಲ್ಲಿಯೇ ಸಚಿವ ಸ್ಥಾನ ದೊರಕುವುದು ಎಂದರು.

Leave a Comment