2 ಬೈಕ್‌ಗಳಿಗೆ ಬೆಂಕಿ

ಪಾವಗಡ, ಆ. ೧- ಎರಡು ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಅರಸೀಕರೆ ಪೋಲೀಸ್ ಠಾಣೆ ವ್ಯಾಪ್ತಿಯ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವರದರೆಡ್ಡಿ ಎಂಬುವರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಆಗುಂತಕರು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಎರಡೂ ವಾಹನಗಳು ಸುಟ್ಟು ಕರಕಲಾಗಿವೆ.

ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆ ಪಿಎಸ್ಐ ಲಕ್ಷ್ಮೀಕಾಂತ್ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment