ಧಾರವಾಡ, ಸ.10-ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಸೋಮವಾರ (ಸಪ್ಟಂಬರ್ 10 ರಂದು) ಇಂದು ಸಂಜೆ 6 ಗಂಟೆಗೆ ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮಕ್ಕೆ ಆಗಮಿಸುವರು.
ಸುಳ್ಳ ಗ್ರಾಮದ ಪಂಚಗೃಹ ಹಿರೇಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ಜರುಗಿದ ನವಿಲುಗುಂದದ ಶ್ರೀನಾಗಲಿಂಗ ಶಿವಯೋಗಿಗಳ ಪುರಾಣ ಪ್ರವಚನದ ಮಂಗಲದ ಅಂಗವಾಗಿ  ಹಮ್ಮಿಕೊಂಡಿರುವ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯವಹಿಸಿ ಶ್ರೀರಂಭಾಪುರಿ ಜಗದ್ಗುರುಗಳು ಆಶೀರ್ವಚನ ನೀಡುವರು.
ಬೆಳಗಾವಿ ಜಿಲ್ಲೆ ದೊಡವಾಡ ಹಿರೇಮಠದ ಶ್ರೀಜಡೆಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ತಾಲೂಕಿನ ಅಮ್ಮಿನಬಾವಿ ಗ್ರಾಮದ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು.
ಸುಳ್ಳ ಗ್ರಾಮದ ಪಂಚಗೃಹ ಹಿರೇಮಠದ ಶ್ರೀಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಈ ಧರ್ಮ ಜಾಗೃತಿ ಸಮಾರಂಭದ ಅಧ್ಯಕ್ಷತೆವಹಿಸಲಿದ್ದು, ಸಮಾರಂಭದಲ್ಲಿ ವಿವಿಧ ಗಣ್ಯರಿಗೆ ಗುರುರಕ್ಷೆ ನೀಡಿ ಗೌರವಿಸಲಾಗುವುದು. ಭಜನೆ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಲಿದ್ದು, ಹೆಚ್ಚಿನ ಮಾಹಿತಿಗೆ 9449687140 ಮೊಬೈಲ್  ಸಂಖ್ಯೆಗೆ ಸಂಪರ್ಕಿಸುವಂತೆ ನಗರದ ಶ್ರೀಜಗದ್ಗುರು ಪಂಚಾಚಾರ್ಯ ಮಾನವಧರ್ಮ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಆರ್. ರಾಮನಗೌಡರ ಹಾಗೂ ಉಪಾಧ್ಯಕ್ಷ ಸಿ.ಆರ್. ಹಳ್ಳಿಗೇರಿಮಠ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment