25ನೇ ವಾರ್ಡ್ : 75 ಲಕ್ಷ ಕಾಮಗಾರಿಗೆ ಪೂಜೆ

ರಾಯಚೂರು.ಜೂ.30- ನಗರದ ವಾರ್ಡ್ 25 ರಲ್ಲಿ 75 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಚಾಲನೆ ನೀಡಿದರು.
ಈ ಪೂಜಾ ಕಾರ್ಯಕ್ರಮಕ್ಕೆ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಮಾಜಿ ಶಾಸಕ ಎ.ಪಾಪಾರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಿರ್ವಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ್ ಅವರು, ಉದ್ದೇಶಿತ ಕಾಮಗಾರಿ ಈ ವಾರ್ಡ್ ಅಭಿವೃದ್ಧಿಗೆ ಅನುಕೂಲವಾಗಲೆಂದು ಹೇಳಿದ ಅವರು, ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು. ಕಾಮಗಾರಿ ಉತ್ತಮ ಗುಣಮಟ್ಟದಿಂದ ನಿರ್ವಹಿಸುವ ಮೂಲಕ ಈ ಭಾಗದ ಜನರ ಅನುಕೂಲಕ್ಕೆ ಇನ್ನೂ ಹೆಚ್ಚಿನ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೋಪಾಲರೆಡ್ಡಿ, ನಗರಸಭೆ ಸದಸ್ಯರಾದ ಮಹೇಂದ್ರ ರೆಡ್ಡಿ, ರವೀಂದ್ರ ಜಲ್ದಾರ್, ಕಡಗೋಳ ಆಂಜಿನೇಯ್ಯ, ಪೋಗಲ್ ಶ್ರೀನಿವಾಸ ರೆಡ್ಡಿ, ಬಂಗಿ ನರಸರೆಡ್ಡಿ, ರವೀಂದ್ರ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share

Leave a Comment