25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ
ತುಮಕೂರು,ಫೆ. ೧೮- ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರೆಕಲ್ಲುಘಟ್ಟ ಗ್ರಾಮದಲ್ಲಿ ಮಹಿಳೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 25 ವರ್ಷದ ಬಳಿಕ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ತಿಳಿಸಿದರು.

ಸಿದ್ಧಹನುಮಯ್ಯ (54) ಎಂಬಾತನೇ ಬಂಧಿತ ಆರೋಪಿ. ಈತ 1994 ರಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಈರಮಲ್ಲಮ್ಮ ಎಂಬ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ್ದನು. ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂದು ಹೆದರಿ ಊರು ಬಿಟ್ಟು ಓಡಿ ಹೋಗಿದ್ದನು. ಇತ್ತೀಚೆಗೆ ನಡೆದ ಮಾಸಿಕ ಅಪರಾಧ ಸಭೆಯಲ್ಲಿ ಆರೋಪಿಯನ್ನು ಶೀಘ್ರವಾಗಿ ಪತ್ತೆಹಚ್ಚುವಂತೆ ಸೂಚಿಸಲಾಗಿತ್ತು.

ಇದಕ್ಕಾಗಿ ಕೊರಟಗೆರೆ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಬಿ.ಸಿ. ಮಂಜುನಾಥ್, ಸಿಬ್ಬಂದಿಗಳಾದ ವೆಂಕಟೇಶ್, ದೊಡ್ಡಲಿಂಗಯ್ಯ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಈ ವಿಶೇಷ ತಂಡವು ಆರೋಪಿ ನೆಲಮಂಗಲ ಬಳಿಯ ಬೆಟ್ಟಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಧುಗಿರಿ ಡಿವೈಎಸ್ಪಿ ಪ್ರವೀಣ್ ಉಪಸ್ಥಿತರಿದ್ದರು.

Leave a Comment