28 ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ

ಕಲಬುರಗಿ,ಫೆ.15-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಾಸಕ ದತ್ತಾತ್ರೇಯ ಪಾಟೀಲ ಅವರ ಜನ್ಮದಿನದ ಅಂಗವಾಗಿ ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿ ಬಳಗ ಮತ್ತು ಆದರ್ಶ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಫೆ.28 ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ವೈದ್ಯ ಡಾ.ಅಲೋಕ ಸಿ.ಪಾಟೀಲ ತಿಳಿಸಿದರು.

ಆದರ್ಶ ಆಸ್ಪತ್ರೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ 150 ಕಂಪನಿಗಳು ಮುಂದೆ ಬಂದಿದ್ದು, ಉದ್ಯೋಗ ಮೇಳಕ್ಕೆ ಆನ್ ಲೈನ್ ಮುಖಾಂತರ 8 ರಿಂದ 10 ಸಾವಿರ ಯುವಕರು ತಮ್ಮ ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ನಿರುದ್ಯೋಗಿ ಯುವಕರಿಗೆ ಅರ್ಹ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಈ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಯುವಕರು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿ ಬಳಗ ಮತ್ತು ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಅಭಿಮಾನಿ ಬಳಗದ ಸದಸ್ಯರಾದ ಮಹೇಶ ರೆಡ್ಡಿ, ಮಹಾದೇವ ಬೆಳಮಗಿ, ಶ್ರೀನಿವಾಸ ದೇಸಾಯಿ, ಶಾಂತಕುಮಾರ ದುಧನಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

Leave a Comment