ಬರೇಲಿಯಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬರೇಲಿ, ಜೂ13 – ಉತ್ತರ ಪ್ರದೇಶದ ನವಾಬ್ ಗಂಜ್ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬಾಲಕಿ ನೀರು ತರಲು ಹೋಗಿದ್ದ ಸಮಯದಲ್ಲಿ ಈ ಘಟನೆ ಜರುಗಿದೆ. ಯುವಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ಮನೆಗೆ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಈ ಘಟನೆಯ ಬಗ್ಗೆ ಬಾಲಕಿ ಕುಟುಂಬಕ್ಕೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಸಂಸಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ಹುಡುಗಿಯ ಕುಟುಂಬವನ್ನು ತಿಳಿದಿದ್ದವರೇ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ

ಆರೋಪಿಯ ಬಂಧನಕ್ಕೆ ವ್ಯಾಪಕ ಶೋಧ ಕಾರ್ಯ ನಡೆಸಲಾಗಿದ್ದು, ಪೊಲೀಸರು ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ.

Leave a Comment