ಕಲಬುರಗಿಯಲ್ಲಿ ರೌಡಿಗಳ ಹೊಡೆದಾಟ

 

ಕಲಬುರಗಿ,ಜೂ.14-ಕ್ಷುಲ್ಲಕ ಕಾರಣಕ್ಕೆ ರೌಡಿಗಳ ನಡುವೆ ಹೊಡೆದಾಟ ನಡೆದ ಘಟನೆ ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ.

ಬೈಕ್ ಪಾರ್ಕಿಂಗ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಗಳಾದ ಕೆಂಚ್ಯಾ, ಶಾಣ್ಯಾ ಮತ್ತು ಇನ್ನೊಬ್ಬ ರೌಡಿಶೀಟರ್ ಬೀರಬಲ್ ಸಿಂಗ್ ಗುಂಪಿನ ನಡುವೆ ಹೊಡೆದಾಟ ನಡೆದಿದೆ.

ಹೊಡೆದಾಟದಲ್ಲಿ ಬೀರಬಲಸಿಂಗ್ ಮತ್ತು ಆತನ ಸಹಚರರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಡೆದಾಟದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸರೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment