45 ಜೂಜುಕೋರರ ಸೆರೆ: 3.17 ಲಕ್ಷ ರೂ. ವಶ

ತುಮಕೂರು, ಜೂ. ೧೨- ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ 45 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 3.17 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಸಿರಾ ತಾಲ್ಲೂಕಿನ ಎಮ್ಮೇರಹಳ್ಳಿ ಸಮೀಪ (ರಿಕ್ರಯೇಷನ್ ಕ್ಲಬ್ ಹತ್ತಿರ) ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಅವರಿಗೆ ಬಂದ ದೂರವಾಣಿ ಕರೆ ಆಧರಿಸಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ಕಚೇರಿಯ ಪ್ರೊಭೆಷನರಿ ಡಿವೈಎಸ್ಪಿ ಓಂಪ್ರಕಾಶ್, ಡಿಸಿಐಬಿ ಇನ್ಸ್‌ಪೆಕ್ಟರ್ ಅಂಬರೀಶ್ ಮತ್ತು ಸಿಬ್ಬಂದಿ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಜೂಜಾಟದಲ್ಲಿ ನಿರತರಾಗಿದ್ದ 45 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 3.17 ಲಕ್ಷ ರೂ. ನಗದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಸಿರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment