500 ನೌಕರರ ವಿರುದ್ಧ ಎಸಿಬಿ ಪ್ರಕರಣ ದಾಖಲು

ಬೆಳಗಾವಿ (ಸುವರ್ಣಸೌಧ), ನ. ೧೪- ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇದುವರೆಗೂ 500 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿಂದು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ವಿಪಕ್ಷ ನಾಯಕ ಜಗದೀಶ್‌ಶೆಟ್ಟರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಎಸಿಬಿ 500 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದರು.
ಮುಖ್ಯಮಂತ್ರಿಗಳ ಉತ್ತರದಿಂದ ಸಮಾಧಾನಗೊಳ್ಳದ ಶೆಟ್ಟರ್ ಅವರು, ಯಾವ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದ್ದೀರಿ ಹೇಳಿ ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, 500 ಪ್ರಕರಣಗಳಲ್ಲಿ ಕ್ರಮ ಕೈಗೊಂಡಿದೆ. ಈ ಬಗ್ಗೆ ಮಾಹಿತಿಯನ್ನು ಪಡೆದು ಸದನದಲ್ಲಿ ಉತ್ತರ ನೀಡುತ್ತೇನೆ. ಅದಕ್ಕೆ ಕಾಲಾವಕಾಶ ಬೇಕು ಎಂದರು
ಎಸಿಬಿ ದಾಖಲಿಸಿರುವ ಯಾವ ಪ್ರಕರಣವನ್ನು ಮುಚ್ಚಿಡುವ ಅಗತ್ಯವಿಲ್ಲ. ಆರ್‌‌ಟಿಐ ಇರುವುದರಿಂದ ಯಾವುದೇ ಪ್ರಕರಣವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Comment