6 ರಾಜ್ಯಗಳ ಹಣಕಾಸು ಸಚಿವರಿಗೆ ಚಿದು ಅಭಿನಂದನೆ

ನವದೆಹಲಿ, ಜ. ೧೧- ಕೇಂದ್ರ ಸರ್ಕಾರ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆಯ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದ ಕೀರ್ತಿ 6 ರಾಜ್ಯಗಳ ಪಕ್ಷದ ಹಣಕಾಸು ಸಚಿವರಿಗೆ ಸಲ್ಲಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, ಜಿಎಸ್‌ಟಿ ಮಂಡಲಿಯಲ್ಲಿ ಈ ಆರು ಮಂದಿ ಹಣಕಾಸು ಸಚಿವರು ಸಕ್ರಿಯವಾಗಿ ಪಾಲ್ಗೊಂಡು ನೆರವು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪ್ರಯತ್ನಗಳನ್ನು ಮುಕ್ತಕಂಠದಿಂದ ಶ್ಲಾಘಿಸುವುದಾಗಿ ಹೇಳಿದರು.
ಜಿಎಸ್‌ಟಿ ಅನುಷ್ಠಾನಗೊಳಿಸುವ ಮೂಲಕ ಕೇಂದ್ರ ಸರ್ಕಾರ ಸಾಕಷ್ಟು ಸಮಸ್ಯೆಗಳು ಉಂಟಾಗಿತ್ತು. ಇದನ್ನು ಬಗೆಹರಿಸುವಲ್ಲಿ 6 ಮಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ಹೇಳಿದರು.
ಈ ಕುರಿತು ಸಚಿವರಿಗೆ ಅಭಿನಂದನೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಯಿತು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

Leave a Comment