ಮುಂದುವರೆದ ಪಶು ವೈದ್ಯಕೀಯ ಸಂಘದ ಪದಾಧಿಕಾರಿ ಧರಣಿದಾವಣಗೆರೆ, ಮೇ. ೧9- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಶು ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಪದಾಧಿಕಾರಿಗಳು ನಡೆಸುತ್ತಿರುವ ಧರಣಿ 4 ನೇ ದಿನವಾದ ಇಂದೂ ಸಹ ಮುಂದುವರೆದಿದೆ. ಪ್ರತಿಭಟನಾ ಸ್ಥಳಕ್ಕೆ ಇಂದು ಬೆಳಗ್ಗೆ ಹರಿಹರ ಶಾಸಕ ಹೆಚ್.ಎಸ್.ಶಿವಶಂಕರ್ ಭೇಟಿ ನೀಡಿದ್ದರು. ಈ ವೇಳೆ ಪ್ರತಿಭಟನಾ ನಿರತರ ಅಹವಾಲುಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು ವೈದ್ಯರ ಸೇವೆ ಅನ್ಯನ್ಯ ಅದರಲ್ಲಿಯೂ ಮೂಕಪ್ರಾಣಿಗಳ ಸೇವೆ ಮಾಡುತ್ತಿರುವುದು ಅತ್ಯಂತ ಪವಿತ್ರವಾದುದು. ಆದರೆ ಎಲ್ಲೆಡೆ ಅನಿರ್ಧಿಷ್ಟ ಮುಷ್ಕರ ಕೈಗೊಂಡಿರುವುದರಿಂದ ಜಾನುವಾರುಗಳಿಗೆ ಸಮಸ್ಯೆ ಉಂಟಾಗಲಿದೆ.

ಆದ್ದರಿಂದ ಅನಿರ್ಧಿಷ್ಟಾವಧಿ ಹೋರಾಟ ಕೈಬಿಟ್ಟು ಹಂತ ಹಂತವಾಗಿ ಬೇಡಿಕೆ ಈಡೇರಿಕೆಗೆ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು. ಈಗಾಗಲೇ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ. ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. ವೃಂದ ಮತ್ತು ನೇಮಕಾತಿ ನಿಯಮಗಳ ಅಧಿಸೂಚನೆಗೆ ಒತ್ತಾಯಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಪದಾಧಿಕಾರಿಗಳು ಪಶು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ಹಾಲೇಶಪ್ಪ, ಹನುಮಂತಪ್ಪ, ಡಾ. ಜಯಣ್ಣ. ಡಾ. ಶಿವಪ್ರಸಾದ್, ಡಾ. ಖಾಜಿ ನಿಸಾರ್ ಅಹ್ಮದ್, ಡಾ. ಜಿ.ಎಂ. ಸಂತೋಷ್ ಮತ್ತಿತರರಿದ್ದರು.

Leave a Comment