FDA, SDA ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆ 12-  ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲೆ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

219 ಪ್ರಥಮ ದರ್ಜೆ ಸಹಾಯಕರು, 494 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಫೆಬ್ರವರಿ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 13 ಶುಲ್ಕ ಪಾವತಿಗೆ ಕೊನೆಯ ದಿನವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏಪ್ರಿಲ್ 7, 13 ಮತ್ತು 28 ರಲ್ಲಿ ನಡೆಸುವ ಸಾಧ್ಯತೆ ಇದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ-2ಎ 2ಬಿ 3ಎ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದ್ದು, ಅಪ್ಲಿಕೇಶನ್ ಪ್ರೊಸೆಸಿಂಗ್ ಚಾರ್ಜ್ ಪಾವತಿಸಬೇಕಿದೆ. ವಿವರಗಳಿಗೆ ಆಯೋಗದ ವೆಬ್ ಸೈಟ್ ಗಮನಿಸಬಹುದಾಗಿದೆ.

Leave a Comment