Home ಜಿಲ್ಲೆ ಅಂಬೇಡ್ಕರ್ ಜಯಂತಿಯಲ್ಲಿ ಪ್ಲಾಸ್ಟಿಕ್ ಹೂ ಬಳಕೆಗೆ  ಖಂಡನೆ

ಅಂಬೇಡ್ಕರ್ ಜಯಂತಿಯಲ್ಲಿ ಪ್ಲಾಸ್ಟಿಕ್ ಹೂ ಬಳಕೆಗೆ  ಖಂಡನೆ

(ಸಂಜೆವಾಣಿ ವಾರ್ತೆ)

ಬಳ್ಳಾರಿ,ಏ.14: ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ವೇಳೆ ಹೋರಾಟಗಾರ ಕಟ್ಟೆ ಸ್ವಾಮಿ ಅವರು ಆಗಮಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ.  ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದರು. ಮಹಾನಗರ ಪಾಲಿಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ ಇದ್ದರೂ ಕೂಡ ಅಂಬೇಡ್ಕರ್ ಅವರ ಪುತ್ಥಳಿಯ ಸುತ್ತ ಹೂವಿನ ಅಲಂಕಾರ ಬದಲು ಪ್ಲಾಸ್ಟಿಕ್ ಹೂಗಳನ್ನು ಬಳಸಿರುವುದನ್ನು ಅವರು ಖಂಡಿಸಿದರು.

ಇಡೀ ದೇಶಕ್ಕೆ ಮಾದರಿಯಾದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯಂತಹ ಮಹತ್ವದ ದಿನದಲ್ಲಿ ಈ ರೀತಿಯ ನಿರ್ಲಕ್ಷ್ಯ ತೋರಿರುವುದು ವಿಷಾದನೀಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಆಕ್ರೋಶಭರಿತ ಮನವಿ ಸಲ್ಲಿಸಿದರು.