
ಸಂಜೆವಾಣಿ ವಾರ್ತೆ
ಕೆ.ಆರ್.ನಗರ,ಜ.11:- ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿರುವ ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಸೂರ್ಯ, ಗೌತಮ ನಿಂಬಾಳ್ಕರ್, ಲಿಖಿತ, ಸುಹಾಸ್ ಇವರು ಮೈಸೂರು ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಇದೆ ತಿಂಗಳ ಜ.14 ರಿಂದ 17 ರವರೆಗೆ ಭಾರತೀದಾಸನ್ ವಿಶ್ವವಿದ್ಯಾನಿಲಯ ತಿರುಚಿರಾಪಳ್ಳಿ, ತಮಿಳುನಾಡಿನಲ್ಲಿ ಜರುಗಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಎಲ್ಲಾ ಉಪನ್ಯಾಶಕರು ಹಾಗೂ ವಿದ್ಯಾರ್ಥಿಗಳಿಂದ ಅಭಿನಂದಿಸಲಾಯಿತು.


























