
ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಪ್ರಾರಂಭೋತ್ಸವ ಹಾಗೂ ನೂತನವಾಗಿ ಆರಂಭಗೊಂಡ ಜನತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉದ್ಘಾಟನೆ ಕಾರ್ಯಕ್ರಮವು ಜೂನ್ ೧ರಂದು ಜರುಗಿತು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಸಂಸ್ಥಾಪಕರಾದ ಸಾಯ ಕೃಷ್ಣ ಭಟ್ ಹಾಗೂ ವಾರಣಾಶಿ ಸುಬ್ರಾಯ ಭಟ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಮಾತನಾಡಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ, ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಶುಭ ಹಾರೈಸಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಸದಸ್ಯರಾದ ಗೋವಿಂದರಾಯ ಶೆಣೈ ಎ., ಉಪೇಂದ್ರ ಪೈ ಅಡ್ಯನಡ್ಕ, ಸಚ್ಚಿದಾನಂದ ಶಾಸ್ತ್ರಿ ನೆಕ್ಕರೆ, ಅಬ್ದುಲ್ ಕರೀಮ್ ಕುದ್ದುಪದವು, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್ ಎಸ್, ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ, ಜನತಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಎಂ. ಉಪಸ್ಥಿತರಿದ್ದರು.
ಜನತಾ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಕನ್ನಡ ಅಧ್ಯಾಪಕರಾದ ಶಿವಕುಮಾರ್ ಸಾಯ ಅವರು ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲೆಯನ್ನು ತಳಿರು ತೋರಣಗಳು, ಬಣ್ಣ ಬಣ್ಣದ ಬಲೂನ್‌ಗಳಿಂದ ಅಲಂಕರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮಧ್ಯಾಹ್ನ ಬಿಸಿಯೂಟದೊಂದಿಗೆ ಪಾಯಸದ ಔತಣವನ್ನು ವಿದ್ಯಾರ್ಥಿಗಳಿಗೆ ಉಣಬಡಿಸಲಾಯಿತು. ಪಠ್ಯಪುಸ್ತಕಗಳನ್ನು ಹಾಗೂ ಲೇಖನ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.





























