ಅಣ್ಣಾಮಲೈರಿಂದ ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ

ಮಂಗಳೂರು, ಜೂ. 30- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಭೇಟಿ ಬಳಿಕ ಮಾತನಾಡಿದ ಅವರು, ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಿದ್ದೇವೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ.
ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು. ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ನೀಡಲು ಬಿಜೆಪಿ ಮುಂದಾಗಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಇದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.