ಶಿವಮೊಗ್ಗ, ಸೆ. ೧೨: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ಸೊರಬ ತಾಲೂಕಿನ ಸಾಗರ ರಸ್ತೆಯಲ್ಲಿ ನಡೆದಿದೆ.
ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್, ಉಳವಿಯ ಪಶು ವೈದ್ಯಾಧಿಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ
ವಾಹನ ಸವರಾರು ರಾತ್ರಿ ವೇಳೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ಸಂಚರಿಸುವಾಗ ಮುಂಜಾಗೃತೆ ವಹಿಸಬೇಕು. ಈಗಾಗಲೇ ಅರಣ್ಯ ಇಲಾಖೆಯಿಂದ ಗಸ್ತು ನಡೆಸಲು ಸಿಬ್ಬಂದಿ ನೇಮಕ ಮಾಡಲಾಗಿದ್ದು, ತಾಯಿ ಚಿರತೆ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಸಂಚರಿಸಬಹುದು.
ಹಾಗಾಗಿ ಸಾರ್ವಜನಿಕರು ಎಚ್ಚರ ವಹಿಸಬೇಕು. ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಪಾದ ನಾಯ್ಕ. ವಲಯ ಅರಣ್ಯಾಧಿಕಾರಿ. ಸೊರಬ ವಲಯ ಹೇಳಿದ್ದಾರೆ.























