
ಸುಳ್ಯ:ಅರಂತೋಡು ಗ್ರಾಮ ಪಂಚಾಯತಿ ವತಿಯಿಂದ ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ(ದಾಖಲೆ ಕೊಠಡಿ)ಗಳ ಉದ್ಘಾಟನೆ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ ಗ್ರಾಮ ಪಂಚಾಯಿತಿ ಮತ್ತು ಸಹಕಾರಿ ಸಂಘಗಳು ಒಟ್ಟಾಗಿ ಕೆಲಸ ಮಾಡುವುದರಿಂದ ಗ್ರಾಮದ ಅಭಿವೃದ್ಧಿ ಸಾಧ್ಯ. ಗ್ರಾಮ ಪಂಚಾಯಿತಿಯಲ್ಲಿ ಕಲಿಕಾ ಕೇಂದ್ರ, ಗ್ರಂಥಾಲಯ ಮತ್ತು ಜಿಮ್‌ನಂತಹ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದು ಗ್ರಾಮಸ್ಥರಿಗೆ ಜ್ಞಾನಾರ್ಜನೆ, ಮನರಂಜನೆ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರು ಮತ್ತು ಯುವಕರಿಗೆ ವಿವಿಧ ಸಂಘಟನೆಗಳು ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶಗಳಿವೆ. ಇದು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಮತ್ತು ಸಮಾಜದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ, ಪಿ.ಡಿ.ಒ ಜಯಪ್ರಕಾಶ್ ಎಂ.ಆರ್ ಇತರ ಅಧಿಕಾರಿಗಳು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಭಾಗವಹಿಸಿದರು.































