ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನ ಬಂಧನ

ಕೋಟ: ವಿಶ್ವಕಪ್ ಟಿ೨೦ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರನ್ನು ಸೇರಿಸಿಕೊಂಡು ಹಣ ಸಂಗ್ರಹಿಸಿ ಆನ್‌ಲೈನ್‌ನಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮನಿತ್ (೨೬),ವಾಸ: ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮ, ಬ್ರಹ್ಮಾವರ ತಾಲೂಕು ಎಂದು ಗುರುತಿಸಲಾಗಿದೆ. ಆರೋಪಿಯನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ ೦೯-೦೨-೨೦೨೬ರಂದು ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಸಾರ್ವಜನಿಕರು ಸ್ಥಳದಿಂದ ಓಡಿ ಹೋಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆತನ ವಶದಲ್ಲಿದ್ದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸುತ್ತಿದ್ದ ಐಫೋನ್ ಮೊಬೈಲ್ ಹಾಗೂ ಬೆಟ್ಟಿಂಗ್ ಹಣ ರೂ.೮೦೦/- ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತನು ಓಮನ್?ಜಿಂಬಾಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಮೊಬೈಲ್‌ನಲ್ಲಿರುವ Pಂಖಏಏಇಖ೭೭೭ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಸಂಘಟಿತವಾಗಿ ಇತರರೊಂದಿಗೆ ಸೇರಿಕೊಂಡು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದುದಾಗಿ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ ೨೧/೨೦೨೬ರಡಿ ಕಲಂ ೧೧೨ ಃಓS, ೭೮(i)(iii) ಏP ಂಛಿಣ ಹಾಗೂ ಕಲಂ ೬೬ Iಖಿ ಂಛಿಣ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.