Home ಜಿಲ್ಲೆ ಆನ್ ಲೈನ್ ಔಷಧ ಮಾರಾಟ ವಿರೋಧಿಸಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಆನ್ ಲೈನ್ ಔಷಧ ಮಾರಾಟ ವಿರೋಧಿಸಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಸಂಜೆವಾಣಿ ವಾರ್ತೆ

ಹೊಸಪೇಟೆ.ಮೇ,20- ಆನ್ಲೈನ್ ಔಷಧ ಮಾರಾಟ ವಿರೋಧಿಸಿ, ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘಟನೆ ಇಂದು ದೇಶದಾಧ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆಯಲ್ಲಿ ವಿಜಯನಗರ ಜಿಲ್ಲಾಧ್ಯಂತ ಔಷಧ ವ್ಯಾಪಾರಿಗಳು ತಮ್ಮ ಔಷಧ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನಲೆಯಲ್ಲಿ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿಂದು ಔಷಧ ವ್ಯಾಪಾರಿಗಳು ತಮ್ಮ ಆಂಗಡಿಗಳನ್ನು ಬಂದ್ ಮಾಡುವ ಮೂಲಕ ವಿಜಯನಗರ ಜಿಲ್ಲಾ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಗಾಂಧಿ ಚೌಕ್ ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮೂರಂಗಡಿ ವೃತ್ತ, ಪುಣ್ಯಮೂರ್ತಿ ವೃತ್ತ, ಮಾರ್ಡನ್ ವೃತ್ತ, ಪುನೀತ್ ರಾಜ್ ಕುಮಾರ್ ವೃತ್ತದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ಹೊರ ಹಾಕಿದರು.

ಪ್ರತಿಭಟನೆಯಲ್ಲಿ ವಿಜಯನಗರ ಜಿಲ್ಲಾ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜೆ.ಸಂತೋಷ್ ಕುಮಾರ್, ಗೌರವಾಧ್ಯಕ್ಷ ಕೆ.ಬಸವರಾಜ ರೆಡ್ಡಿ, ಕಾರ್ಯದರ್ಶಿ ಟಿ.ವಾಹೀದ್ ಸಾಹೇಬ್, ಖಜಾಂಚಿ ಸತೀಶ್ ವೇಮಲ್, ಉಪಾಧ್ಯಕ್ಷರಾದ ಕೆ.ಬಿ.ಮಲ್ಲಿಕಾರ್ಜುನ, ರಾಜಶೇಖರ್ ಸ್ವಾಮಿ, ಟಿ.ಎಂ.ರುದ್ರಮುನಿ ಸ್ವಾಮಿ, ಪಿ.ಪ್ರಶಾಂತ ಪೂಜಾರ್ ಸೇರಿದಂತೆ ಸಂಘದ ಸದಸ್ಯರು, ಔಷಧ ವ್ಯಾಪಾರಿಗಳು ಭಾಗವಹಿಸಿದ್ದರು.

ಔಷಧ ವ್ಯಾಪಾರಿಗಳ ಪ್ರತಿಭಟನೆ ಹಿನ್ನಲೆಯಲ್ಲಿ ನಗರದ ಔಷಧ ಅಂಗಡಿಗಳು ಬಹುತೇಕ ಬಂದ್ ಆಗಿದ್ದವು. ಔಷಧಿಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯನಗರ ಜಿಲ್ಲಾ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ಅದ್ಯಕ್ಷ ಸಂತೋಷ್ ಕುಮಾರ್ ಮಾತನಾಡಿ , ದೇಶದಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಅನ್ ಲೈನ್ ನಲ್ಲಿ ಮಾರಾಟ ಮಾಡುವ ಔಷಧಿ ಗಳು ಅರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತವೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಆನ್ ಲೈನ್ ಮಾರಾಟ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.