Home ಜಿಲ್ಲೆ ಆರೋಗ್ಯ ಇಲಾಖೆಯಿಂದ ತಂಬಾಕು ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ

ಆರೋಗ್ಯ ಇಲಾಖೆಯಿಂದ ತಂಬಾಕು ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ

ಸಂಜೆವಾಣಿ ವಾರ್ತೆ

ಹೊಸಪೇಟೆ, ಮೇ.06. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಿಮ್ಮಯ್ಯ ಶೆಟ್ಟಿ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಮಂಗಳವಾರ ಜರುಗಿತು.

ಹಗರಿಬೊಮ್ಮನಹಳ್ಳಿ ತಾಲೂಕಿನ ತಿಮ್ಮಯ್ಯ ಶೆಟ್ಟಿ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ಮಂಗಳವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ತಂಬಾಕು ಸೇವನೆಯು ಜಾಗತಿಕವಾಗಿ ಲಕ್ಷಾಂತರ ಸಾವುಗಳಿಗೆ ಕಾರಣವಾಗುವ ಮಾರಕ ವ್ಯಸನವಾಗಿದೆ. ಯುವ ಜನತೆಯನ್ನು ಈ ದುಶ್ಚಟದಿಂದ ರಕ್ಷಿಸಲು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದಾಗಿದೆ. ವಿದ್ಯಾರ್ಥಿಗಳು ತಂಬಾಕು ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.

ತಾಲ್ಲೂಕು ಅರೋಗ್ಯ ಶಿಕ್ಷಣಾಧಿಕಾರಿ ಯಮುನವ್ವ ಉಪ್ಪಾರ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಸಾಮಾಜಿಕ ಜವಾಬ್ದಾರಿ ಆಗಿದೆ. ತಂಬಾಕು ಸೇವನೆಯಿಂದ ಉಂಟಾಗುವ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳ ಬಗ್ಗೆ ಕುಟುಂಬ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮ ಮೂಲ ಉದ್ದೇಶವಾಗಿದೆ. ಆರೋಗ್ಯವಂತ ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳು ಮುಂದಾಳತ್ವ ವಹಿಸಿದರೆ, ಭವಿಷ್ಯದ ಪೀಳಿಗೆಯನ್ನು ಈ ಮಾರಕ ವ್ಯಸನದಿಂದ ರಕ್ಷಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರೇಣುಕಾ ಪ್ರಸಾz,ï ಆರೋಗ್ಯ ಇಲಾಖೆಯ ಪರವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಿಕ ಕಾರ್ಯಕರ್ತ ಬೋಜರಾಜ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.