
ಸಂಜೆವಾಣಿ ವಾರ್ತೆ
ನಂಜನಗೂಡು: ಫೆ.28:– ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬಿ ನಾಟ್ ಮೆಷಿನ್, ಸ್ಕ್ಯಾನಿಂಗ್ ಮೆಷಿನ್, ಅಲ್ಟ್ರಾಪೆÇೀರ್ಟಬಲ್ ಹ್ಯಾಂಡ್ಹೆಲ್ಡ್ ಡಿಜಿಟಲ್ ಎಕ್ಸ್-ರೇ ಯಂತ್ರ ಹಾಗೂ ವಾಹನದ ಮೂಲಕ ತಾಲ್ಲೂಕಿನ ಪ್ರತಿ ಮನೆ ಮನೆಗೆ ಸಂಚರಿಸಿ ಅರೋಗ್ಯವದಗಿಸುವ ಆರೋಗ್ಯ ಸೇತು ಕಾರ್ಯಕ್ರಮವನ್ನು ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಮತ್ತು ಒಐಅ ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು.
ಈ ಹೊಸ ಸೌಲಭ್ಯಗಳಿಂದ ರೋಗಿಗಳಿಗೆ ತ್ವರಿತ ಹಾಗೂ ನಿಖರವಾದ ಪರೀಕ್ಷೆಗಳು ಲಭ್ಯವಾಗಲಿದ್ದು, ಗ್ರಾಮೀಣ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಆಊಔ ಕುಮಾರಸ್ವಾಮಿ ಮುಖ್ಯ ವೈದ್ಯಾಧಿಕಾರಿ ಶಿವಪ್ರಸಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ , ನಗರ ಬ್ಲಾಕ್ ಅಧ್ಯಕ್ಷರಾದ ಸಿ.ಎಂ. ಶಂಕರ್ ಹಾಗೂ ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಸೇರಿದಂತೆ ಹಾಕವು ಮುಖಂಡರು ಮತ್ತು ವೈದ್ಯರು ಉಪಸ್ಥಿತರಿದ್ದರು.

























