
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.2: ಶಾಲಾ ಶಿಕ್ಷಣ ಇಲಾಖೆ ಹಾಗೂ ಇಂದಿರಾನಗರ, ಪಾರ್ವತಿ ನಗರ ಮತ್ತು ಕೋಟೆ ಕ್ಲಸ್ಟರ್ಗಳ ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಇಂದಿರಾನಗರ ವಲಯ ಮಟ್ಟದ ಎರೆಡು ದಿನಗಳ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆರಂಭಗೊಂಡಿತು.
ಕ್ರೀಡಾಕೂಟದಲ್ಲಿ 100 ಮತ್ತು 400 ಮೀಟರ್ ಓಟ, ರಿಲೇ, ಖೋಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ತಟ್ಟೆ ಎಸೆತ, ಗುಂಡೆ ಎಸೆತ, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 300 ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.
ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಬಹುಮಾನಗಳನ್ನು ವಿತರಿಸಲಾಯ್ತು.
ಕಾರ್ಯಕ್ರಮದಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೊಟ್ರೇಶ್, ಗೌರವಾಧ್ಯಕ್ಷ ಚಿನ್ನಮಾರಣ್ಣ, ಜಿಲ್ಲಾ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ತಾಲೂಕು ಪರಿವೀಕ್ಷಕರಾದ ಪದ್ಮಾರೆಡ್ಡಿ, ದೈಹಿಕ ಶಿಕ್ಷಕರ ಅಧ್ಯಕ್ಷ ವೀರನಗೌಡ, ಇಂದಿರಾನಗರ ವಲಯ ಕಾರ್ಯದರ್ಶಿ ಶಾಂತಕುಮಾರಿ, ತಾಲೂಕು ಪ್ರಾಥಮಿಕ ಶಿಕ್ಷಕರಾದ ತುಕಾರಾಂ, ತಾಲೂಕು ಕಾರ್ಯದರ್ಶಿ ಶಿವಶಂಕರ್, ಸಂಘಟನಾ ಕಾರ್ಯದರ್ಶಿ ಬಸವರಾಜ್, ಸಿಆರ್ಪಿ ಸಿದ್ದಪ್ಪ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































