
ಅಡಿಸ್ ಅಬಾಬಾ, ಡಿ.,17:- ಇಥಿಯೋಪಿಯಾ ಜೊತೆಗಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಆಹಾರ ಮತ್ತು ಆರೋಗ್ಯ ಭದ್ರತೆ, ಸಾಮಥ್ರ್ಯ ವೃದ್ಧಿ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಎಂಬ 3 ಪ್ರಮುಖ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರೊಂದಿಗಿನ ಚರ್ಚೆ ವೇಳೆ ಭಾರತ- ಇಥಿಯೋಪಿಯಾ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆ ಹೆಚ್ಚಿಸಲು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ
ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ಬಳಿಕ ಇಥಿಯೋಪಿಯಾದಲ್ಲಿ ಅಲ್ಲಿನ ಪ್ರಧಾನಿ ಜೊತೆಗೆ ನಡೆದ ಮಾತುಕತೆಯಲ್ಲಿ ಉಭಯ ದೇಶಗಳ ಬಾಂಧವ್ಯ ಬಲವರ್ಧನೆಗೆ ಆದ್ಯತೆ ನೀಡಲಾಗುವು. ಸ್ನೇಹ ಬಾಂಧವ್ಯವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ತಿಳಿಸಿದ್ದಾರೆ
ಇಥಿಯೋಪಿಯಾದ ಆಹಾರ ಭದ್ರತೆ ಹೆಚ್ಚಿಸಲು ಸುಸ್ಥಿರ ಕೃಷಿ, ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಸಹಕಾರ ನೀಡಲು ಆದ್ಯತೆ ನೀಡುವುದಾಗಿ ಹೇಳಿದ್ದಾರೆ.
ಸಾಮಥ್ರ್ಯ ವೃದ್ಧಿ ಉಪಕ್ರಮಗಳಲ್ಲಿ ಕೃತಕ ಬುದ್ಧಿಮತ್ತೆಯಲ್ಲಿ ಹೊಸ ಕಾರ್ಯಕ್ರಮಗಳ ಪರಿಚಯ ಮತ್ತು ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ದ್ವಿಗುಣಗೊಳಿಸುವುದು ಸೇರಿದ್ದು ಇದರಿಂದಾಗಿ ಹೆಚ್ಚಿನ ಇಥಿಯೋಪಿಯಾದ ವಿದ್ಯಾರ್ಥಿಗಳು ಭಾರತದಲ್ಲಿ ಶಿಕ್ಷಣವನ್ನು ಮುಂದುವರಿಸಲು ಅವಕಾಶ ಮಾಡಿಕೊಡಲು ಸಮ್ಮತಿ ನೀಡಿ
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ಸಹಯೋಗ ನಾವೀನ್ಯತೆ ಮತ್ತು ಆರ್ಥಿಕ ಬೆಳವಣಿಗೆ ಬೆಂಬಲಿಸುವ ಗುರಿ ಹೊಂದಿದೆ. ಒಟ್ಟಾಗಿ, ಈ ಹಂತಗಳು ಭಾರತ ಮತ್ತು ಇಥಿಯೋಪಿಯಾ ನಡುವಿನ ವಿಸ್ತರಿಸುತ್ತಿರುವ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತವೆ, ಹಂಚಿಕೆಯ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಲಾಗಿದೆ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಅವರೊಂದಿಗೆ ವ್ಯಾಪಕ ಚರ್ಚೆ ನಡೆಸಿದ್ದೇವೆ. ಭಾರತ-ಇಥಿಯೋಪಿಯಾ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲು ನಿರ್ಧರಿಸಿದ್ದೇವೆ. ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಮೂರು ಪ್ರಮುಖ ಸಲಹೆಗಳನ್ನು ನೀಡಿದ್ದೇವೆ ಎಂದಿದ್ದಾರೆ.
ಆಹಾರ ಭದ್ರತೆ ಮತ್ತು ಆರೋಗ್ಯ ಭದ್ರತೆಯಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸುವುದು. ಇದರಲ್ಲಿ ಸುಸ್ಥಿರ ಕೃಷಿ, ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಸಹಕಾರ ಸೇರಿದೆ. ಸಾಮಥ್ರ್ಯ ವೃದ್ಧಿ. ಕೃತಕ ಬುದ್ಧಿಮತ್ತೆಯಲ್ಲಿ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸಲು ಮತ್ತು ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ದ್ವಿಗುಣಗೊಳಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಅನೇಕ ಇಥಿಯೋಪಿಯನ್ ವಿದ್ಯಾರ್ಥಿಗಳು ಭಾರತದಲ್ಲಿ ಉನ್ನತ ಶಿಕ್ಷಣ ಅವಕಾಶಗಳನ್ನು ಪಡೆಯಲು ಮತ್ತು ಯುವಜನರಿಂದ ಯುವಜನರ ನಡುವಿನ ಸಂಬಂಧವನ್ನು ಬಲಪಡಿಸಲು ಅನುವು ಮಾಡಿಕೊಡುತ್ತದೆ” ಎಂದು ಹೇಳಿದ್ದಾರೆ.
ಔಷಧಗಳು, ಡಿಜಿಟಲ್ ಆರೋಗ್ಯ, ವೈದ್ಯಕೀಯ ಪ್ರವಾಸೋದ್ಯಮ ಮತ್ತು ಇನ್ನೂ ಹೆಚ್ಚಿನವುಗಳಲ್ಲಿ ಸಹಯೋಗವನ್ನು ಹೆಚ್ಚಿಸುವುದು. ಇಂಧನ ಮತ್ತು ನಿರ್ಣಾಯಕ ಖನಿಜಗಳಂತಹ ವಲಯಗಳು ಸಹ ಅನೇಕ ಅವಕಾಶಗಳನ್ನು ನೀಡುತ್ತವೆ ಎಂದಿದ್ದಾರೆ.
ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರು ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಅರಮನೆ ವಸ್ತುಸಂಗ್ರಹಾಲಯಕ್ಕೆ ಕರೆದೊಯ್ದರು. ಅಲ್ಲಿನ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದರು.




























