ಬೆಂಗಳೂರು,ಸೆ.೪-ನಗರದ ಕೆಜಿ.ಹಳ್ಳಿ, ಪುಲಿಕೇಶಿನಗರ, ಶಿವಾಜಿನಗರ ಸಂಚಾರ ಠಾಣಾ ವ್ಯಾಪ್ತಿಯ ನಾಗವಾರ ಮುಖ್ಯರಸ್ತೆ, ಟ್ಯಾನರಿ ಮುಖ್ಯರಸ್ತೆ, ಹೇನ್ಸ್ ರಸ್ತೆ ಮಿಲ್ಲರ್ಸ್ ಮುಖ್ಯರಸ್ತೆಯಲ್ಲಿ ಈದ್-ಎ-ಮಿಲಾದ್ ಅಂಗವಾಗಿ ನಾಳೆ ಸ್ತಬ್ದ ಚಿತ್ರಗಳು, ವಾದ್ಯಗಳ ಮುಖಾಂತರ ಕಂಬಲ್ ಪೋಷ್ ದರ್ಗಾಕ್ಕೆ ಮೆರವಣಿಗೆ ಮೂಲಕ ಸಾಗುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಳಗ್ಗೆ ೧೦ ರಿಂದ ಗಂಟೆಯಿಂದ ರಾತ್ರಿ ೧೦ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾ
ಗಿದೆ.
ಸಂಚಾರ ನಿರ್ಬಂಧ:
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಮಾಸ್ಟ್ ಜಂಕ್ಷನ್‌ನಿಂದ ಎಂ.ಎಂ ರಸ್ತೆ ಮೂಲಕ ನೇತಾಜಿ ಜಂಕ್ಷನ್‌ವರೆಗೆ ಎಂ.ಎಂ. ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಬದಲಾಗಿ ಏಕ ಮುಖ ಸಂಚಾರವನ್ನಾಗಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದ್ದು, ನೇತಾಜಿ ಜಂಕ್ಷನ್‌ನಿಂದ ಮಾಸ್ಕ್ ಜಂಕ್ಷನ್ ಕಡೆಗೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ. ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ಜಂಕ್ಷನ್‌ವರೆಗೆ ಹೇನ್ಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಸಂಚಾರ ನಿರ್ಬಂಧ:
ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಸಂಚರಿಸುವ ವಾಹನಗಳು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಬಳಿ ಎಡ ತಿರುವು ಪಡೆದು ಲಿಂಗರಾಜಪುರಂ ಪ್ರೈ ಓವರ್ ಮೂಲಕ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿ ನಗರ ಕಡೆಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿರುತ್ತದೆ ಹಾಗೂ ನಾಗವಾರ ಜಂಕ್ಷನ್‌ನಿಂದ ಬಲತಿರುವು ಪಡೆದು ಹೆಬ್ಬಾಳ ಮುಖೇನ ನಗರಕ್ಕೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
ಶಿವಾಜಿ ನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳನ್ನು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆಯವರು ಮಾರ್ಗ ಬದಲಾವಣೆ ಮಾಡಿ, ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದು.
ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳನ್ನು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್ ಇಂದ ಬಲತಿರುವು ಮಾಸ್ಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕ್ಲಾರೆನ್ಸ್ ರೈಲ್ವೆ ಮೇಲ್ಲೇತುವೆಯಲ್ಲಿ ಪಾಟರಿ ರಸ್ತೆಗೆ ಬಲ ತಿರುವು ಪಡೆದು ಪಾಟರಿ ರಸ್ತೆ ಮತ್ತು ಹೆಣ್ಣೂರು ರಸ್ತೆ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಮುಖ್ಯರಸ್ತೆ – ಲಿಂಗರಾಜಪುರಂ ಪ್ರೈಓವರ್ ಮುಖೇನ ಬಾಣಸವಾಡಿ ಹಾಗೂ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಹೆಣ್ಣೂರು. ಮಾಡಿಕೊಡಲಾಗಿದೆ.
ಮಾಸ್ಕ್ ಜಂಕ್ಷನ್‌ನಿಂದ ಎಂ.ಎಂ ರಸ್ತೆಯಲ್ಲಿ ನೇತಾಜಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ಮಾಸ್ಕ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಲಾಗಿದೆ.
ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ಹೇನ್ಸ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಎಂ.ಎಂ ರಸ್ತೆ ಮೂಲಕ ಮಾಸ್ಕ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಿಕೊಡಲಾಗಿರುತ್ತದೆ.
ಪಾರ್ಕಿಂಗ್ ನಿರ್ಬಂಧ:
ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ & ಸು ಪೊಲೀಸ್ ಠಾಣೆಯವರೆಗೆ ಮತ್ತು ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್ ವರೆಗೆ, ನೇತಾಜಿ ರಸ್ತೆ, ಹೇನ್ಸ್ ರಸ್ತೆ, ಎಂ.ಎಂ ರಸ್ತೆ, ಮಾಸ್ಕ್ ರಸ್ತೆ, ಕೋಲ್ಸ್ ರಸ್ತೆ, ಸೌಂಡರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಮಿಲ್ಲರ್ ರಸ್ತೆಗಳ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿರುತ್ತದೆ.


























