
ವಾಷಿಂಗ್ಟನ್, ಜು.4- ರಷ್ಯಾ-ಉಕ್ರೇನ್ ಕದನ ವಿರಾಮದ ಸಾಧ್ಯತೆ ಬಗ್ಗೆ ಮಾತುಕತೆಗಳು ನಡೆಯುತ್ತಿರುವ ನಡುವೆಯೇ ಉಕ್ರೇನ್‍ಗೆ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ’ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಂತರ ಪ್ರತಿಕ್ರಿಯಿಸಿದ ಅವರು ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಸಂಭಾವ್ಯ ಕದನ ವಿರಾಮದ ಕುರಿತು ಯಾವುದೇ ಪ್ರಗತಿ ಸಾಧಿಸಿಲ್ಲ ಎಂದು ಹೇಳಿದ್ದಾರೆ.
ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಉಭಯ ದೇಶಗಳ ನಡುವೆ ಕದನ ವಿರಾಮ ಕುರಿತು ಯಾವುದೇ ಪ್ರಗತಿ ಸಾಧಿಸಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದರೂ ಅದು ಫಲಪ್ರಧವಾಗಿಲ್ಲ ಎಂದು ತಿಳಿಸಿದ್ದಾರೆ.
ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆಯ ವೇಳೆ ಇರಾನ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದೇವೆ ಮತ್ತು ಉಕ್ರೇನ್ ಜೊತೆಗಿನ ಯುದ್ಧದ ಬಗ್ಗೆಯೂ ಮಾತನಾಡಿದ್ದೇವೆ. ಆ ಬಗ್ಗೆ ತಾವು ಸಂತೋಷ ಅಥವಾ ತೃಪ್ತರಾಗಿಲ್ಲ ಎಂದು ತಿಳಿಸಿದ್ದಾರೆ.
ಉಕ್ರೇನ್ ಜೊತೆಗಿನ ಯುದ್ಧದ ಬಗ್ಗೆಯೂ ಮಾತನಾಡಿದ್ದೇವೆ. ಅದರ ಬಗ್ಗೆ ನನಗೆ ಸಂತೋಷವಿಲ್ಲ. ಹಲವು ಸುತ್ತಿನ ಮಾತುಕತೆ ನಂತರ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಹಾಯಕ ಯೂರಿ ಉಷಕೋವ್ ಈ ಕುರಿತು ಪ್ರತಿಕ್ರಿಯಿಸಿ ಅಮೆರಿಕಾ ಅಧ್ಯಕ್ಷರೊಂದಿಗೆ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಆದರೆ ಯಾವುದೇ ಅಂತಿಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಉಕ್ರೇನ್ ಮತ್ತು ರಷ್ಯಾ ನಡುವೆ ಕಳೆದ ಮೂರು ವರ್ಷಗಳಿಗೂ ಅಧಿಕ ಸಮಯದಿಂದ ನಡೆಯುತ್ತಿರುವ ಸಂಘರ್ಷ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಗಿದೆ. ರಾಜತಾಂತ್ರಿಕ ಸಮಸ್ಯೆಯ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.
ಉಕ್ರೇನ್ ಸಂಘರ್ಷ ಮತ್ತು ಮಧ್ಯಪ್ರಾಚ್ಯ ಬೆಳವಣಿಗೆಗಳ ಕುರಿತು 60 ನಿಮಿಷಗಳ ಕಾಲ ನಡೆದ ವಿಸ್ತೃತ ಸಂಭಾಷಣೆಯ ಸಂದರ್ಭದಲ್ಲಿ, ಉಕ್ರೇನ್‍ನಲ್ಲಿನ ಮಿಲಿಟರಿ ಕಾರ್ಯಾಚರಣೆಗಳಿಗೆ ಶೀಘ್ರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಾಕ್ಸ್
ಕಾರ್ಯಕ್ರಮ ಮೊಟಕುಗೊಳಿಸಿದ ವ್ಲಾಡಿಮಿರ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಬೇಕಾಗಿದ್ದ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಾವು ಭಾಗವಹಿಸಿದ್ದ ಕಾರ್ಯಕ್ರಮವನ್ನು ಅರ್ಧಕ್ಕೆ ಬಿಟ್ಟು ಹೋದ ಘಟನೆ ನಡೆದಿದೆ.
ಪ್ರಂಪ್ ಜೊತೆ ಸಮಯ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಕಾಯಿಸುವುದು ಸೂಕ್ತ ಅಲ್ಲ ಎನ್ನುವ ಕಾರಣಕ್ಕೆ ತಾವು ಭಾಗವಹಿಸಿದ್ದ ಕಾರ್ಯಕ್ರಮವನ್ನು ಮೊಟಕುಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಹಾಯಕ ಯೂರಿ ಉಷಕೋವ್ ಈ ಕುರಿತು ಪ್ರತಿಕ್ರಿಯಿಸಿ ಅಮೆರಿಕಾ ಅಧ್ಯಕ್ಷರೊಂದಿಗೆ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಆದರೆ ಯಾವುದೇ ಅಂತಿಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ ಎಂದಿದ್ದಾರೆ.