
ಉಡುಪಿ-ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ ೯ ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (೨೧) ಎಂಬ ಮಹಿಳೆಯು ಅದೇ ದಿನ ಮಧ್ಯಾಹ್ನ ೧೨.೧೫ ರ ಬಳಿಕ ನಾಪತ್ತೆಯಾಗಿರುತ್ತಾರೆ.
೫ ಅಡಿ ೪ ಇಂಚು ಎತ್ತರ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಸಪೂರ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.



























