Home ಜಿಲ್ಲೆ ಮಂಗಳೂರು ಉಡುಪಿ: ಯುವತಿ ನಾಪತ್ತೆ ; ಪತ್ತೆಯಾದಲ್ಲಿ ಪೊಲೀಸರನ್ನು ಸಂಪರ್ಕಿಸಿ

ಉಡುಪಿ: ಯುವತಿ ನಾಪತ್ತೆ ; ಪತ್ತೆಯಾದಲ್ಲಿ ಪೊಲೀಸರನ್ನು ಸಂಪರ್ಕಿಸಿ

ಉಡುಪಿ-ಬೈಂದೂರು ತಾಲೂಕು ಕಿರಿಮಂಜೇಶ್ವರ ದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (೩೧) ಎಂಬ ಮಹಿಳೆಯು ಫೆಬ್ರವರಿ ೫ ರಂದು ಮಧ್ಯಾಹ್ನ ೩ ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
೫ ಅಡಿ ೩ ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: ೦೮೨೫೪-೨೫೧೦೩೩, ಮೊ.ನಂ: ೯೪೮೦೮೦೫೪೫೯, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: ೦೮೨೫೪-೨೫೧೦೩೧, ಮೊ.ನಂ:೯೪೮೦೮೦೫೪೩೪ ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: ೦೮೨೦-೨೫೨೬೪೪೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.