
ಉಡುಪಿ-ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದ್ದು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು ೧೧೯೯ ಪ್ರಕರಣಗಳಲ್ಲಿ ೯,೬೨,೪೦೦ರೂ. ದಂಡ ವಿಧಿಸಲಾಗಿದೆ.
ಡಿ.೨೪ರಿಂದ ಡಿ.೩೧ವರೆಗೆ ಹಮ್ಮಿಕೊಳ್ಳಲಾದ ಈ ವಿಶೇಷ ಕಾರ್ಯಾಚರಣೆ ಅಂಗವಾಗಿ ಜಿಲ್ಲೆಯ ಒಟ್ಟು ೨೯ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ೧೧೯೯ ಪ್ರಕರಣ ಗಳನ್ನು ದಾಖಲಿಸಿಕೊಂಡು ೯,೪೨,೬೦೦ ರೂ. ದಂಡವನ್ನು ವಿಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಕುಡಿದು ವಾಹನ ಚಲಾಯಿಸಿದ ೧೦೩, ಹೆಲ್ಮಟ್ ರಹಿತ ವಾಹನ ಸವಾರಿ ಮಾಡಿರುವ ೮೦೩, ಸೀಟ್ ಬೇಲ್ಟ್ ಧರಿಸದೆ ವಾಹನ ಚಲಾಯಿಸಿದ ೨೪೩, ಒಂದು ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಿರುವ ೩೫ ಹಾಗೂ ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ ೧೫ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.




























