ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ; ಇಬ್ಬರ ಬಂಧನ

ಉಳ್ಳಾಲ-ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಫಝಲ್ ಹುಸೇನ್(೩೩) ಮತ್ತು ನೌಶಾದ್(೩೨) ಬಂಧಿತ ಆರೋಪಿಗಳು.
ಬಂಧಿತರು ತಚ್ಛಣಿ ಗ್ರೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳಿಂದ ೧೫ ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ ೯೫,೫೦೦ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.