
ಸಂಜೆವಾಣಿ ನ್ಯೂಸ್
ಮೈಸೂರು:ಜು.06:- ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ, ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆಂದು ಹೇಳಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈವರೆಗೆ ಅನುಮತಿ ಕೊಡಿಸದೇ ವಚನಭಷ್ಟರಾಗಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ(ಜಿಲ್ಲಾ) ಕಾಂಗ್ರೆಸ್ ಸಮಿತಿ ವತಿಯಿಂದ ಮಹಾರಾಜ ಕಾಲೇಜು ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆ ಯೋಜನೆಯಾದ ಮೇಕೆದಾಟು ಯೋಜನೆಯಿಂದ ಮಂಡ್ಯಘಿ, ಕನಕಪುರ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಿಗೆ, ಕುಡಿಯುವ ನೀರಿಗೆ ಅನುಕೂಲವಾಗಲಿದೆ. ರಾಜ್ಯ ಸರಕಾರ ಈ ಯೋಜನೆ ಡಿಪಿಆರ್ ಸಿದ್ದಪಡಿಸಿದೆ. ಆದರೆ, ಕೇಂದ್ರ ಸರಕಾರ ಅನುಮತಿ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ತಾವು ಮಂಡ್ಯದಿಂದ ಲೋಕಸಭೆಗೆ ಅಯ್ಕೆಯಾದರೆ, ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದರೂ,ಆದರೆ ಒಂದು ವರ್ಷ ಕಳೆದರೂ ಇದರ ಬಗ್ಗೆ ವೌನವಹಿಸಿದ್ದಾರೆ. ಅಲ್ಲದೇ, ಮೈಸೂರು, ಹಾಸನ, ಮಂಡ್ಯ,ಚಾಮರಾಜನಗರ ಸೇರಿ ರಾಜ್ಯದ ಯಾವುದೇ ಭಾಗದಲ್ಲಿ ನೂತನ ಕೈಗಾರಿಕೆ ಸ್ಥಾಪನೆ ಮಾಡಲು ಕ್ರಮ ಕೈಗೊಂಡ್ಲಿಲ. ನಿರುದ್ಯೋಗ ಸಮಸ್ಯೆ ಪರಿಹಾರ ಕಂಡುಕೊಳ್ಳುವಲ್ಲಿ ವಿಲರಾಗಿದ್ದಾರೆ ಎದು ಕಿಡಿಕಾರಿದರು.
ಕಳಸ ಬಂಡೂರಿ, ಮಹಾದಾಯಿ ಯೋಜನೆ, ಭದ್ರ ಮೇಲ್ಡಂಡೆ ಯೋಜನೆಗೆ 24ನೇ ಸಾಲಿನ ಬಜೆಟ್‍ನಲ್ಲಿ 5ಸಾವಿರ ಕೋಟಿ ರೂ., ಕೇಂದ್ರ ಸರಕಾರ ಘೋಷಣೆ ಮಾಡಿತು. ಆದರೆ, ಇಲ್ಲಿಯವರೆವಿಗೂ ಈ ಹಣ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ ಬರಬೇಕಾದ ಜಿ.ಎಸ್‍ಟಿ ತೆರಿಗೆ ಪೂರ್ಣಪ್ರಮಾಣದಲ್ಲಿ ನೀಡಿಲ್ಲ. ಇದರ ಬಗ್ಗೆ ಸಂಸತ್ತಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಧ್ವನಿ ಎತ್ತಲಿ ಎಂದು ಒತ್ತಾಯಿಸಿದರು.
ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಅತಿ ಹೆಚ್ಚು ತೆರಿಗೆ ಹಣ ಹೋಗುತ್ತಿದೆ. ಆದರೆ, ಕೇಂದ್ರ ಸರಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಇದರ ಬಗ್ಗೆ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಪ್ರಶ್ನಿಸಲಿ ಎಂದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್, ಕೆಪಿಸಿಸಿ ಕಾರ್ಯದರ್ಶಿ ನಟರಾಜ್, ಎನ್.ಆರ್.ನಾಗೇಶ್, ಲೋಕೇಶ್, ಮದನ್, ಪ್ರಕಾಶ, ಮಹದೇವಸ್ವಾಮಿ, ಮೋಹನ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.