
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಫೆ.03: ತಾಲೂಕಿನ ಚೇಳ್ಳಗುರ್ಕಿ, ರೂಪನಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜೆ.ಟಿ.ಫೌಂಡೇಶನ್ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಹಾಗೂ ಪೆನ್ನುಗಳನ್ನು ನಿನ್ನೆ ಮಧ್ಯಾಹ್ನ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಜೆ.ಟಿ.ಫೌಂಡೇಶನ್ ತಿಮ್ಮಪ್ಪ ಜೋಳದರಾಶಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾರಿಗೂ ಕಡಿಮೆಯಲ್ಲ. ದೇಶದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡಿದವರೂ ಸಹ ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಎಸ್ಸೆಸ್ಸೆಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಲಾಗುತ್ತಿದೆಂದರು.
ಹಿರಿಯ ಪತ್ರಕರ್ತರಾದ ಶಶಿಧರಮೇಟಿ, ಹಾಗೂ ಕೆ.ಎಂ. ಮಂಜುನಾಥ, ಎಂ. ಎಂ. ಪಿ ಪ್ರತಾಪ ನಾಯುಡು,ಜೋಳದರಾಶಿ ಮನೋಜ ಮೊದಲಾದವರು ಇದ್ದರು

























