
ಸಂಜೆವಾಣಿ ವಾರ್ತೆ
ಹೊಸಪೇಟೆ.ಅ.25 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆಯಲ್ಲಿ ತಾಲೂಕಿನ ನಾಗೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಎ.ಸೌಮ್ಯ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
200-ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಮತ್ತು 300 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತಿಯ ಸ್ಥಾನ ಪಡೆಯುವ ಮೂಲಕ ಎ.ಸೌಮ್ಯ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಎ.ಸೌಮ್ಯ ರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಉಮಾಪತಿ, ಶಾಲೆಯ ಮುಖ್ಯಗುರು ರುದ್ರಪ್ಪ ಲಂಬಾಣಿ, ದೈಹಿಕ ಶಿಕ್ಷಕಿÀ ಅಶ್ವಿನಿ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಶಂಕರ್ ದೇವರಮನಿ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಉಪಾಧ್ಯಕ್ಷ ಮತ್ತು ಸರ್ವ ಸದಸ್ಯರು ಅಭಿನಂದಿಸಿದ್ದಾರೆ.
























